Saturday, 20 June 2020

ದನಿರೂಪಕ


ಕವಿತೆಗಿಂತ ಅಪಾಯಕಾರಿಯಾದ ಯಾವುದೂ ಇಲ್ಲಿಲ್ಲ?

ದಕ್ಷಿಣ ಅಮೇರಿಕ ಹಾಗು ಚಿಲಿ ತೀವ್ರ ಸಂಘರ್ಷ ಎದುರಿಸುತ್ತಿದ್ದ ಕಾಲಕ್ಕೆ ಸಾಕ್ಷಿಯಾಗಿ ನೆರೂಡನ ಕವಿತೆಗಳು ಸೃಷ್ಟಿಯಾದವು. ಎಲ್ಲೇ ಹೋದರೂ, ಯಾವ ಹುದ್ದೆಯನ್ನೇ ನಿರ್ವಹಿಸುತ್ತಿದ್ದರೂ ಆತ ಕವಿತೆ ಬರೆಯುವುದು ನಿಲ್ಲಿಸಲಿಲ್ಲ. ಯಾವ ನೆಲದಲ್ಲಿದ್ದನೋ ಅಲ್ಲಿಯ ಸಾರ ಸತ್ವ, ಸಂಕಟಗಳನ್ನೆಲ್ಲ ಹೀರಿಕೊಂಡು ಕವಿತೆ ಬರೆದ ಎಂದೇ ಜನವಿರೋಧಿ ಆಳ್ವಿಕರಿಗೆ ಅವು ಅಪಾಯಕಾರಿಯಾಗಿ ಕಂಡವು. ಒಮ್ಮೆ ಚಿಲಿಯ ಪೆÇೀಲಿಸರಿಂದ ಅವನ ಮನೆ ತಪಾಸಣೆಗೊಳಗಾದಾಗ, ಎಲ್ಲಿ ಬೇಕಾದರೂ ಹುಡುಕಿ, ಕವಿತೆಗಿಂತ ಅಪಾಯಕಾರಿಯಾದ ಯಾವುದೂ ಇಲ್ಲಿಲ್ಲ? ಎಂದು ಹೇಳಿದ.

ಕವಿಗೇಕೆ ಬೊಂಬೆ?

ಕಪ್ಪುಚಿಪ್ಪುಗಳಂತೆಯೇ ಕವಿಯ ಬಳಿ ವಿಶಿಷ್ಟ ಬೊಂಬೆ ಸಂಗ್ರಹವೂ ಇತ್ತು! ಬೊಂಬೆಯಾಕಾರದ ವೈನ್ ಬಾಟಲು, ಬಾಟಲಿಯೊಳಗೆ ಹಡಗು ಕೂರಿಸಿದ ಬೊಂಬೆ, ಹಡಗಿನ ಮುಂಚೂಣಿಯಲ್ಲಿರುತ್ತಿದ್ದ ಫಿಗರ್ ಹೆಡ್ ಬೊಂಬೆ ಎಲ್ಲ ಅವನಲ್ಲಿದ್ದವು. ಕವಿಗೇಕೆ ಗೊಂಬೆ? ಅವನ ಮಾತುಗಳಲ್ಲೇ ನಮ್ಮ ಅಚ್ಚರಿಗೆ ಉತ್ತರವಿದೆ: ಆಟವಾಡದ ಮಗು ಮಗುವೇ ಅಲ್ಲ, ಆಟವಾಡದೇ ಬೆಳೆದ ವ್ಯಕ್ತಿಗಳು ತಮ್ಮೊಳಗಿನ ಮಗುವನ್ನು ಶಾಶ್ವತವಾಗಿ ಕಳೆದುಕೊಂಡಿರುತ್ತಾರೆ. ತಮ್ಮೊಳಗಿನ ಮಗುತನಕ್ಕೆ ಅಪರಿಚಿತರಾಗಿರುತ್ತಾರೆ. ನಾನು ನನ್ನ ಮನೆಯನ್ನು ಬೊಂಬೆಮನೆಯ ಹಾಗೆ ಕಟ್ಟಿದ್ದೇನೆ. ಬೆಳಗಿನಿಂದ ಸಂಜೆಯವರೆಗೆ ಆಡುತ್ತೇನೆ?

ನಾನು ನನ್ನ ಮನೆ ಇಸ್ಲಾ ನೆಗ್ರಾವನ್ನು ಜನತೆಗೆ ಅರ್ಪಿಸುತ್ತಿದ್ದೇನೆ; ಒಂದಲ್ಲ ಒಂದು ದಿನ ಅದು ಯೂನಿಯನ್ ಮೀಟಿಂಗುಗಳ ಸ್ಥಳವಾಗುತ್ತದೆ, ಗಣಿ ಕಾರ್ಮಿಕರು, ರೈತರು ವಿಶ್ರಾಂತಿ ಪಡೆಯುವ ಜಾಗವಾಗುತ್ತದೆ. ಹೊಟ್ಟೆಕಿಚ್ಚಿನ ಜನರ ಮೇಲೆ ನನ್ನ ಕಾವ್ಯವು ತೀರಿಸಿಕೊಳ್ಳುವ ಪ್ರತೀಕಾರ ಅದು? ಎಂದು ಹೇಳಿದ. ಜನಪರ ಹೋರಾಟಗಾರನೊಬ್ಬ ಇದಕ್ಕಿಂತ ಉದಾತ್ತವಾಗಿ ತನ್ನ ನೆಲೆಯನ್ನು ಕಲ್ಪಿಸಿಕೊಳ್ಳಲು ಸಾಧ್ಯವೇ?

(ಪಾಬ್ಲೊ ನೆರೂಡ ನೆನಪುಗಳು- ಆತ್ಮಕತೆ, ಕನ್ನಡಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ)

**********


No comments:

Post a Comment

ಎತ್ತಿತೋರಿಸಲಾದ ಪೋಸ್ಟ್

ಅನ್ನಮ್ಮ’ಳಿಗೆ ೨೫೦ರ ಹಾಗೂ ಅತಿ.ವಂ.ಪೊತ್ತಕಮೂರಿಗೆ ೫೦ರ ಸ್ಮರಣೆಯ ಸಂಭ್ರಮ

ಬೆಂಗಳೂರಿನ ಉತ್ತರಹಳ್ಳಿಯ ಅನ್ನಮ್ಮನ ಬೆಟ್ಟ, ಅಲ್ಲಿನ ಅನ್ನಮ್ಮಳ ಸಮಾಧಿ, ಆ ಬೆಟ್ಟದ ಮೇಲಿನ ಶಿಲುಬೆ, ಅಲ್ಲಿ ಪ್ರತಿವರ್ಷ ತಪಸ್ಸು ಕಾಲದ ಐದನೇ ಭಾನುವಾರ ನಡೆಯುವ ಯೇಸು...